ದೇವರಾಜು ಅರಸು ದಾಖಲೆ ಸರಿಗಟ್ಟಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಮಹತ್ವದ ದಾಖಲೆಯೊಂದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹೆಸರಿನಲ್ಲಿ ಬರೆಯಿಸಿಕೊಂಡಿದ್ದಾರೆ. ದೀರ್ಘಕಾಲ ಮುಖ್ಯಮಂತ್ರಿ ಸ್ಥಾನದಲ್ಲಿ ಕಾರ್ಯನಿರ್ವಹಿಸಿದ್ದ ಮಾಜಿ ಸಿಎಂ ದೇವರಾಜು ಅರಸು ಅವರ ಆಡಳಿತಾವಧಿ ದಾಖಲೆಯನ್ನು ಸಿದ್ದರಾಮಯ್ಯ ಅವರು ಇದೀಗ ಸರಿಗಟ್ಟಿದ್ದಾರೆ.1972ರಿಂದ 1977ರವರೆಗೆ ನಿರಂತರವಾಗಿ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿದ್ದ ದೇವರಾಜು ಅರಸು ಅವರು ಸಾಮಾಜಿಕ ನ್ಯಾಯ, ಭೂಸಂಸ್ಕರಣೆ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿಯ ಮೂಲಕ ರಾಜ್ಯ ರಾಜಕೀಯದಲ್ಲಿ ಇತಿಹಾಸ ನಿರ್ಮಿಸಿದ್ದರು. ಆ ದಾಖಲೆಗೆ ಇದೀಗ ಸಿದ್ದರಾಮಯ್ಯ ಅವರ ಆಡಳಿತಾವಧಿ […]

ಮತ್ತಷ್ಟು ಓದಿ

ಬಳ್ಳಾರಿ ರೆಡ್ಡಿ vs ರೆಡ್ಡಿ ಭಾರೀ ಗಲಾಟೆ- ಫೈರಿಂಗ್, ಲಾಠಿಚಾರ್ಚ್!

ಬಳ್ಳಾರಿಯಲ್ಲಿ ಜನವರಿ 3ರಂದು ನಡೆಯಲಿರುವ ವಾಲ್ಮೀಕಿ ಪುತ್ಥಳಿ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆ ಭಾರೀ ಗಲಾಟೆಗೆ ಕಾರಣವಾಗಿದೆ.ಕಾರ್ಯಕ್ರಮಕ್ಕೆ ಶುಭಕೋರುವ ಬ್ಯಾನರ್‌ಗಳನ್ನು ಅಳವಡಿಸುವ ವೇಳೆ ಜನಾರ್ಧನ ರೆಡ್ಡಿ ನಿವಾಸದ ಬಳಿ ಉದ್ವಿಗ್ನತೆ ಉಂಟಾಗಿದ್ದು, ಶಾಸಕ ನಾರಾ ಭರತ್ ರೆಡ್ಡಿ ಅವರ ಆಪ್ತ ಸತೀಶ್ ರೆಡ್ಡಿ ಹಾಗೂ ಜನಾರ್ಧನ ರೆಡ್ಡಿ ಬೆಂಬಲಿಗರ ನಡುವೆ ಮಾತಿನ ಚಕಮಕಿ ಗಲಾಟೆಯಾಗಿ ಮಾರ್ಪಟ್ಟಿತು. ಪರಿಸ್ಥಿತಿ ತೀವ್ರಗೊಂಡು ಕಲ್ಲು ತೂರಾಟ ಕೂಡ ನಡೆದಿದೆ.ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಮಾಜಿ ಸಚಿವ ಶ್ರೀರಾಮುಲು ಆಗಮಿಸಿದ್ದು, ಆ ಬಳಿಕವೂ ಸ್ಥಳದಲ್ಲಿ […]

ಮತ್ತಷ್ಟು ಓದಿ

PSIಗೆ ಕಪಾಳಮೋಕ್ಷ ಮಾಡಿದ ಸ್ವಾಮೀಜಿ ಪೊಲೀಸ್ ವಶ

ವಿಜಯಪುರ-  ಸರ್ಕಾರಿ ಮೆಡಿಕಲ್ ಕಾಲೇಜು ವಿರೋಧಿಸಿ ನಡೆದ ಹೋರಾಟದ ವೇಳೆ ವಿಜಯಪುರದಲ್ಲಿ ಅಹಿತಕರ ಘಟನೆ ನಡೆದಿದೆ. ಸಚಿವ ಎಂಬಿ ಪಾಟೀಲ್ ನಿವಾಸದ ಬಳಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸ್ವಾಮೀಜಿ ಹಾಗೂ ಪೊಲೀಸರ ನಡುವೆ ಗಲಾಟೆ ನಡೆದಿದೆ.ಪ್ರತಿಭಟನೆಯ ಸಮಯದಲ್ಲಿ ಪೊಲೀಸರ ಮೊಬೈಲ್‌ಫೋನ್ ಕಸಿದುಕೊಂಡ ಘಟನೆಗೆ ಆಕ್ರೋಶಗೊಂಡ ಸ್ವಾಮೀಜಿ, ಪಿಎಸ್ಐಗೆ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದೆ. ಸಂಗನಬಸವೇಶ್ವರ ಸ್ವಾಮೀಜಿ ಅವರು ಪಿಎಸ್ಐ ಸೀತಾರಾಮ ಲಮಾಣಿ ಅವರಿಗೆ ಕಪಾಳ ಮೋಕ್ಷ ಮಾಡಿದ ಆರೋಪ ಕೇಳಿಬಂದಿದೆ.ಕಪಾಳ ಮೋಕ್ಷ ಮಾಡಿದ ಸ್ವಾಮೀಜಿ ಬಸವನಬಾಗೇವಾಡಿ […]

ಮತ್ತಷ್ಟು ಓದಿ

ಡಿಸಿ ವಿರುದ್ಧದ ದೂರು ಕಮಿಟಿ ಮುಂದೆ ಚರ್ಚೆ – ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ- ಬೆಳಗಾವಿ ಜಿಲ್ಲಾಧಿಕಾರಿ ವಿರುದ್ಧ ಲೋಕಸಭಾ ಸ್ಪೀಕರ್ ಅವರಿಗೆ ಮಹಾ ಸಂಸದ ಧೈರ್ಯಶೀಲ ಮಾನೆ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.“ಅವರು ದೂರು ನೀಡಿದ್ದಾರೆ ಅಷ್ಟೇ. ಈ ವಿಚಾರ ಕಮಿಟಿ ಮುಂದೆ ಹೋಗಿ ಚರ್ಚೆಯಾಗಬೇಕು. ನಮ್ಮ ಪ್ರಕಾರ ಜಿಲ್ಲಾಧಿಕಾರಿಗಳು ಯಾವುದೇ ತಪ್ಪು ಮಾಡಿಲ್ಲ” ಎಂದು ಹೇಳಿದರು.ಡಿ.ಸಿ ಅವರಿಗೆ ನೋಟೀಸ್ ನೀಡುವ ಬಗ್ಗೆ ಮಾತನಾಡಿದ ಸಚಿವರು, “ನೋಟೀಸ್ ಬಂದರೆ ಕಾನೂನು ರೀತಿ ಹೋರಾಟ ಮಾಡುತ್ತೇವೆ. ಎಷ್ಟರ ಮಟ್ಟಿಗೆ ನೋಟೀಸ್ ನೀಡಲಾಗಿದೆ ಎಂಬುದನ್ನು […]

ಮತ್ತಷ್ಟು ಓದಿ

ಕಾಂಗ್ರೆಸ್ ಖುರ್ಚಿ ಫೈಟ್ – ಸಚಿವ ಜಾರಕಿಹೊಳಿ‌ ಮಾರ್ಮಿಕ ಮಾತು

ಬೆಳಗಾವಿ- ಡಿಕೆ ಶಿವಕುಮಾರ್‌ಗೆ ಹೈಕಮಾಂಡ್‌ನಿಂದ ಕರೆ ಬಂದಿದೆ ಎಂಬ ವಿಚಾರ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಈ ಬೆಳವಣಿಗೆ ಬಗ್ಗೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ಡಿಕೆಶಿ–ಸಿದ್ದರಾಮಯ್ಯ ನಡುವಿನ ಸಂಬಂಧವನ್ನು ಟಾಸ್‌ಗೆ ಹೋಲಿಸಿ ಮಾರ್ಮಿಕವಾಗಿ ಮಾತನಾಡಿದ್ದಾರೆ.“ಈ ವಿಚಾರದಲ್ಲಿ ಅವರನ್ನೇ ಕೇಳಬೇಕು, ನಾವೇನೂ ಹೇಳುವುದಿಲ್ಲ. ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಇಬ್ಬರೂ ಕ್ಯಾಪ್ಟನ್‌ಗಳು. ದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ಟಾಸ್ ಆಗಿದಂತೆ ಇದು. ನಾವು ಕ್ಯಾಪ್ಟನ್ ಸ್ಥಾನದಲ್ಲಿಲ್ಲ. ಆಗ ಥರ್ಡ್ ಅಂಪೈರ್ ಕೂಡ ಇರಲಿಲ್ಲ. ಹೆಡ್ […]

ಮತ್ತಷ್ಟು ಓದಿ

ಗೋಕರ್ಣ ಆಂದ್ಲೆ ಜಗದೇಶ್ವರಿ ದೇವಾಲಯಗಳಲ್ಲಿ ಡಿಕೆಶಿ ವಿಶೇಷ ಪೂಜೆ!

ಉತ್ತರ ಕನ್ನಡ- ಗೋಕರ್ಣದ ಮಹಾಬಲೇಶ್ವರ ದೇವಾಲಯದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (ಡಿಕೆಶಿ) ಆತ್ಮಲಿಂಗ ಸ್ಪರ್ಶ ಪೂಜೆ ನೆರವೇರಿಸಿದರು. ಹಿರಿಯ ಪುರೋಹಿತರ ಮಾರ್ಗದರ್ಶನದಲ್ಲಿ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿದರು. ಗೋಕರ್ಣ ಪೂಜೆ ನಂತರ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಆಂದ್ಲೆ ಗ್ರಾಮದ ಜಗದೇಶ್ವರಿ ದೇವಾಲಯಕ್ಕೆ ಡಿಕೆಶಿ ಭೇಟಿ ನೀಡಿದರು. ದೇವಾಲಯಕ್ಕೆ ಆಗಮಿಸಿದ ವೇಳೆ ಕಾರ್ಯಕರ್ತರು ಹಾಗೂ ಅಭಿಮಾನಿಗಳು “ಮುಂದಿನ ಮುಖ್ಯಮಂತ್ರಿ ಡಿಕೆಶಿ” ಎಂದು ಘೋಷಣೆ ಕೂಗಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಿಕೆಶಿ, ಘೋಷಣೆ ಬೇಡ ಎಂದು ಕೈ ಸನ್ನೆ ಮೂಲಕ ಮನವಿ […]

ಮತ್ತಷ್ಟು ಓದಿ

ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಳಗಾವಿ- ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿಗೆ ಸೇರಿದ ಕಾರು ಅಪಘಾತಕ್ಕೀಡಾದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪಘಾತದಲ್ಲಿ ಸವದತ್ತಿ ಪಟ್ಟಣದ ನಿವಾಸಿ ಮಂಜುನಾಥ್ ಬೈರ್ನಟ್ಟಿ (30) ಮೃತಪಟ್ಟಿದ್ದಾನೆ. ಮಂಜುನಾಥ್ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಒಡೆತನದ ಹರ್ಷಾ ಸಕ್ಕರೆ ಕಾರ್ಖಾನೆಗೆ ಕೆಲಸಕ್ಕೆ ಹೊರಟಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಂಜುನಾಥ್ ತಲೆಗೆ ಗಂಭೀರ ಗಾಯಗಳಾಗಿ […]

ಮತ್ತಷ್ಟು ಓದಿ

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ- ಮ್ಯೂಸಿಕ್ ಮೈಲಾರಿ ವೈದ್ಯಕೀಯ ಪರಿಕ್ಷೆ

ಬಾಗಲಕೋಟೆ- ಮ್ಯೂಸಿಕ್ ಮೈಲಾರಿ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೈಲಾರಪ್ಪ ಸಣ್ಣಕಲಕಪ್ಪ ಮಡಿವಾಳರ (29) ಅಲಿಯಾಸ್ ಮ್ಯೂಸಿಕ್ ಮೈಲಾರಿ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಬನಹಟ್ಟಿಯಿಂದ ಕರೆತಂದ ಪೊಲೀಸರು ಆರೋಪಿಯನ್ನು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ಹಾಜರುಪಡಿಸಿ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ. ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಕಾನೂನು ಪ್ರಕ್ರಿಯೆಯ ಭಾಗವಾಗಿ ಈ ವೈದ್ಯಕೀಯ ತಪಾಸಣೆ ಮಾಡಲಾಗಿದೆ. ವೈದ್ಯಕೀಯ ಪರೀಕ್ಷೆ ವೇಳೆ ಆರೋಪಿಯಿಂದ ರಕ್ತದ ಮಾದರಿ ಮತ್ತು ಕೂದಲಿನ ಮಾದರಿ ಸಂಗ್ರಹಿಸುವ ಸಾಧ್ಯತೆ ಇದ್ದು, ಪ್ರಕರಣಕ್ಕೆ ಸಂಬಂಧಿಸಿದ […]

ಮತ್ತಷ್ಟು ಓದಿ

ಅಭಿವೃದ್ಧಿ, ಇಲ್ಲವೇ ಪ್ರತ್ಯೇಕ ರಾಜ್ಯ – ಶಾಸಕ ರಾಜು ಕಾಗೆ ಅವಾಜ್

ಬೆಳಗಾವಿ- ಉತ್ತರ ಕರ್ನಾಟಕ ಅಭಿವೃದ್ಧಿ ವಿಷಯದಲ್ಲಿ ಸರ್ಕಾರದ ವಿರುದ್ಧ ಮತ್ತೊಮ್ಮೆ ಶಾಸಕ ರಾಜು ಕಾಗೆ ಗಟ್ಟಿಯಾದ ಧ್ವನಿ ಎತ್ತಿದ್ದಾರೆ. ಉತ್ತರ ಕರ್ನಾಟಕಕ್ಕೆ ಸಮರ್ಪಕ ಅಭಿವೃದ್ಧಿ ಒದಗಿಸಬೇಕು, ಇಲ್ಲದಿದ್ದರೆ ಪ್ರತ್ಯೇಕ ರಾಜ್ಯದ ಬೇಡಿಕೆ ಅನಿವಾರ್ಯ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಳಗಾವಿಯ ಓಲ್ಡ್ ಪಿಬಿ ರಸ್ತೆಯಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ರಾಜು ಕಾಗೆ, “ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಮುಂದುವರಿದಿದೆ. ಇದನ್ನು ತಕ್ಷಣವೇ ಹೋಗಲಾಡಿಸಬೇಕು. ಕಿತ್ತೂರು ಕರ್ನಾಟಕ ಭಾಗಕ್ಕೆ ಸಮಾನ ಅಭಿವೃದ್ಧಿ […]

ಮತ್ತಷ್ಟು ಓದಿ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್- ಐಪಿಎಲ್ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲಿ ನಡೆಯುವ ಸಾಧ್ಯತೆ – ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್

ಮೈಸೂರು- ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನಲ್ಲಿ ನಡೆಸುವ ಕುರಿತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಜೊತೆಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, “ಬಿಸಿಸಿಐ ಕೂಡ ಈ ಬಾರಿ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನಲ್ಲಿ ನಡೆಸುವ ಬಗ್ಗೆ ಚರ್ಚೆ ನಡೆಸುತ್ತಿದೆ. ಪ್ರತಿವರ್ಷ ಐಪಿಎಲ್ ಟ್ರೋಫಿ ಗೆದ್ದ ತಂಡದ ಹೋಂ ಗ್ರೌಂಡ್‌ನಲ್ಲೇ […]

ಮತ್ತಷ್ಟು ಓದಿ